Kannada NewsKarnataka NewsLatest
*ಮೆಡಿಕಲ್ ಕಾಲೇಜು ಪ್ರೊಫೆಸರ್ ನಿಂದ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್: ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಮೆಡಿಕಲ್ ಕಾಲೇಜು ಪ್ರೊಫೆಸರ್ ಓರ್ವ ವಿದ್ಯಾರ್ಥಿನಿಗೆ ನಿರಂತರವಾಗಿ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡುತ್ತಿದ್ದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರಿನ ಕದ್ರಿಮಿದ್ರಿ ಬಳಿ ಇರುವ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಡಾ.ಗಂಗಾಧರ್ ವಿರುದ್ಧ ದೂರು ದಾಖಲಾಗಿದೆ. ವಿದ್ಯಾರ್ಥಿನಿ ಕೆಲ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಚಿಕ್ಕಮಗಳೂರು ಗ್ರಾಮಾಂತಾರ ಠಾಣೆಗೆ ಬಂದು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರೊಫೆಸರ್ ವಿರುದ್ಧ ದೂರು ದಾಖಲಾಗಿದೆ.
ಬೆಂಗಳೂರು ಮೂಲದ ಮೆಡಿಕಲ್ ವಿದ್ಯಾರ್ಥಿನಿಗೆ 2023ರಿಂದ ಪ್ರೊಫೆಸರ್ ಗಂಗಾಧರ್ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಪ್ರಕರಣ ಮುಚ್ಚಿ ಹಾಕುವ ಪ್ರಯತ್ನವೂ ನಡೆದಿದೆ ಎಂಬ ಆರೋಪ ಕೇಳಿಬಂದ್ದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

