*ಇಂದು ರಾಮದುರ್ಗದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅಂತ್ಯಕ್ರಿಯೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಭೀರಕ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿರುವ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಹುಟ್ಟೂರು ರಾಮದುರ್ಗ ಪಟ್ಟಣದಲ್ಲಿ ನೀರವ ಮೌನ ಆವರಿಸಿದ್ದು ಇಂದು ಸಾಯಂಕಾಲ ಅಂತ್ಯಕ್ರಿಯೆ ನಡೆಯಲಿದೆ.
ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಹುಟ್ಟೂರು ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಟ. ಸದ್ಯ ಇವರು ಬಾಲ್ಯದ ಬದುಕು ಸಾಗಿಸಿದ ಮನೆಯಲ್ಲಿ ನೀರವ ಮೌನ ಆವರಿಸಿದೆ. ಆಪ್ತ ಸ್ನೇಹಿತನನ್ನು ಕಳೆದುಕೊಂಡ ಸ್ನೇಹ ವರ್ಗ ಗೆಳೆಯನ ನೆನೆದು ಕಣ್ಣೀರು ಹಾಕುತ್ತಿದೆ.
ಮಧ್ಯಾಹ್ನ 2 ಗಂಟೆವರೆಗೂ ಸಾರ್ವಜನಿಕರ ದಶರ್ನಕ್ಕೆ ವ್ಯವಸ್ಥೆ ಕಲ್ಪಿಸಾಲಾಗಿದೆ. ಬಳಿಕ 3 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಇನ್ನು ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.




