Kannada NewsKarnataka NewsLatest

*ಕಾರು ಅಪಘಾತ: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಸ್ನೇಹಿತ ಕೂಡ ಸಾವು*

ಪ್ರಗತಿವಾಹಿನಿ ಸುದ್ದಿ: ಕಲಬುರಗಿ ಬಳಿ ಸಂಭವಿಸಿದ್ದ ಭೀಕರ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಮೃತಪಟ್ಟಿದ್ದರು. ಕಾರಿನಲ್ಲಿದ್ದ ಅವರ ಸ್ನೇಹಿತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಕೂಡ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

Home add -Advt

ಮೃತರನ್ನು ಈರಣ್ಣ ಶಿರಸಂಗಿ ಎಂದು ಗುರುತಿಸಲಾಗಿದೆ. ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈರಣ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಖನಿಜ ನಿಗಮದ ಎಂಡಿಯಾಗಿದ್ದ ಮಹಾಂತೇಶ್ ಬೀಳಗಿ ಸೇರಿ ಐವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಲಬುರಗಿಯ ಜೇವರ್ಗಿ ಬೈಪಾಸ್ ಬಳಿ ಕಾರು ಭೀಕರ ಅಪಘಾತಕ್ಕೀಡಾಗಿತ್ತು. ಅಪಘಾಅದಲ್ಲಿ ಮಹಾಂತೇಸ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದರು. ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಗಾಯಾಳು ಸ್ನೇಹಿತ ಕೂಡ ಕೊನೆಯುಸಿರೆಳೆದಿದ್ದಾರೆ. ಇನ್ನೋರ್ವ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ.

Related Articles

Back to top button