Latest

ಮಹಾರಾಷ್ಟ್ರಕ್ಕೆ ಜೈ ಎನ್ನುವವರು ಬೆಳಗಾವಿಯಲ್ಲಿ ಶಾಸಕರಾಗುತ್ತಾರೆ -ಹೊರಟ್ಟಿ ಕಿಡಿ

  ಕಾರದಗಾದಲ್ಲಿ ಕನ್ನಡ ಸಮಾವೇಶ

     ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಮಹಾರಾಷ್ಟ್ರಕ್ಕೆ ಜೈ ಎನ್ನುವವರು ಬೆಳಗಾವಿಯಲ್ಲಿ ಶಾಸಕರಾಗುತ್ತಾರೆ. ಜನರು ಕನ್ನಡದಲ್ಲೇ ಮಾತನಾಡಿದರೂ ಶಾಸಕರು ಮರಾಠಿಯಲ್ಲಿಯೇ ಮಾತಾಡುತ್ತಾರೆ. ಹೀಗಾಗಿ ಗಡಿ ಭಾಗದಲ್ಲಿ ಕನ್ನಡ ಅಭಿವೃದ್ದಿ ಆಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಗಡಿ ಹಳ್ಳಿ ಕಾರದಗಾ ಗ್ರಾಮದಲ್ಲಿ ಕನ್ನಡ ಬಳಗದ ವತಿಯಿಂದ  ಆಯೋಜಿಸಿರುವ ಕನ್ನಡ ಸಮಾವೇಶ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳ ಬಗ್ಗೆ ಕಿಡಿಕಾರಿದ ಹೊರಟ್ಟಿ , ಇಲ್ಲಿಯ ಬಹುತೇಕ ಶಾಸಕರು ಮರಾಠಿಯಲ್ಲೆ ಮಾತನಾಡುತ್ತಾರೆ ಎಂದರು. 
ಶಾಲೆಗಳಲ್ಲಿ ಕನ್ನಡ ಭಾಷೆಯನ್ನೇ ಬರೆಸುವಂತೆ ನಿಪ್ಪಾಣಿ ಬಿಇಒ ಕೆ. ರಾಮನಗೌಡ ಗೆ ಸಾರ್ವಜನಿಕರ ಎದುರಿನಲ್ಲಿಯೇ ಎಚ್ಚರಿಕೆ ನೀಡಿದ ಅವರು, ಇಲ್ಲದೇ ಹೋದಲ್ಲಿ ಆಂಧ್ರದ ಗಡಿಗೆ ಎತ್ತಂಗಡಿ ಮಾಡಲಾಗುವುದು. ಕನ್ನಡ ಕ್ಕೆ ಒತ್ತು ಕೊಡದ ಶಾಲೆಗಳ ಅನುದಾನ ಕಡತ ಮಾಡಲಾಗುವುದು ಎಂದು ಹೇಳಿದರು. 
ಸಮಾವೇಶದ ಅಂಗವಾಗಿ ತಾಯಿ ಭುವನೇಶ್ವರಿ ಭಾವಚಿತ್ರ ಹಾಗೂ ವಿವಿಧ ಜನಪದ ಮೇಳಗಳ ಮೆರವಣಿಗೆ ನಡೆಯಿತು.
ಸಮಾವೇಶದ ಸರ್ವಾಧ್ಯಕ್ಷತೆಯನ್ನು ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್ ವಹಿಸಿದ್ದಾರೆ. ಚಿಕ್ಕೋಡಿ ಚಿಂಚಣಿ ಮಠದ ಅಲ್ಲಮಪ್ರಭು ಸ್ವಾಮಿಗಳು ಸಮಾವೇಶದ ಸಾನಿಧ್ಯ ವಹಿಸಿದ್ದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button