
ಪ್ರಗತಿವಾಹಿನಿ ಸುದ್ದಿ: ಶ್ರೀಲಂಕದಾದ್ಯಂತ ಭಾರಿ ಮಳೆಯಿಂದಾಗಿ ಪ್ರವಾಹವುಂಟಾಗಿದ್ದು, ಭೂಕುಸಿತಕ್ಕೆ ೫೦ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಪ್ರವಾಹದಿಂದಾಗಿ 600ಕ್ಕೂ ಹೆಚ್ಚು ಮನೆಗಳು ಹಾನಿಯಾಗಿದ್ದು, ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಒಂದು ವರಾದಿಂದ ಶ್ರೀಲಂಕಾದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಮನೆ, ಹೊಲಗದ್ದೆಗಳು, ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ.
ಬದುಲ್ಲಾ ಹಾಗೂ ನುವಾರಾ ಎಲಿಯಾ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಪ್ರವಾಹ, ಭೂಕುಸಿತದಿಂದಾಗಿ ಈವರೆಗೆ 50ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.




