Kannada NewsKarnataka NewsLatest
*ಇನ್ಮುಂದೆ ಮಹಿಳೆಯರು, ಮಕ್ಕಳ ರಕ್ಷಣೆಗೆ ಬರಲಿದೆ ಅಕ್ಕ ಪಡೆ: ಅರಮನೆ ಮೈದಾನದಲ್ಲಿ ಚಾಲನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಹಿಳೆಯರು ಹಾಗೂ ಮಕ್ಕಳ ರಕ್ಷಣೆ, ಸುರಕ್ಷತೆಗಾಗಿ ಅಕ್ಕ ಪಡೆ ಆರಂಭವಾಗಿದ್ದು, ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಾಲನೆ ನೀಡಲಾಯಿರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಕ್ಕ ಪಡೆಗೆ ಚಾಲನೆ ನೀಡಿದರು.
ಈ ಯೋಜನೆ ಮೂಲಕ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಯಲು ಮತ್ತು ತುರ್ತು ಸಂದರ್ಭಗಳಲ್ಲಿ ತಕ್ಷಣದ ಬೆಂಬಲ ನೀಡಲು ಅಕ್ಕ ಪಡೆ ಸಹಾಯವಾಗಲಿದೆ. ಆರಂಭಿಕ ಹಂತದಲ್ಲಿ ಅಕ್ಕ ಪಡೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಹಾಗೂ ಉಡುಪಿ, ಮಂಗಳೂರು, ಬೆಂಗಳೂರು, ಮೈಸೂರು, ಬೆಳಗಾವಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿದ್ದು, ಬಳಿಕ ಇತರ ಜಿಲ್ಲೆಗಳಿಗೆ ವಿಸ್ತರಿಸಲಾಗುತ್ತದೆ.



