Kannada NewsKarnataka NewsLatest
*ಅಯ್ಯಪ್ಪಮಾಲೆ ಧರಿಸಿ ಕಾಲೇಜಿಗೆ ಬಂದ ಮೂವರು ವಿದ್ಯಾರ್ಥಿಗಳು: ಮನೆಗೆ ಕಳುಹಿಸಿದ ಪ್ರಾಂಶುಪಾಲರು*

ಪ್ರಗತಿವಾಹಿನಿ ಸುದ್ದಿ: ಅಯ್ಯಪ್ಪ ಮಾಲೆ ಧರಿಸಿ ಕಾಲೇಜಿಗೆ ಬಂದಿದ್ದ ಮೂವರು ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ವಾಅಪಸ್ ಮನೆಗೆ ಕಳುಹಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಮೂವರು ವಿದ್ಯಾರ್ಥಿಗಳು ಅಯಪ್ಪಸ್ವಾಮಿ ಮಾಲೆ ಧರಿಸಿ ಕಾಲೇಜಿಗೆ ಬಂದಿದ್ದರು. ಮಾಲೆ ತೆಗೆದು ಕಾಲೇಜಿಗೆ ಬರುವಂತೆ ಪ್ರಾಂಶುಪಾಲರು ಸೂಚಿಸಿದ್ದಾರೆ. ವಿದ್ಯಾರ್ಥಿಗಳು ಒಪ್ಪದಿದ್ದಾಗ ಕಾಲೇಜು ಒಳಗೆ ಪ್ರವೇಶ ನೀಡಿಲ್ಲ,. ವಾಪಸ್ ಮನೆಗೆ ಕಳುಹಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಕಾಲೇಜಿಗೆ ದೌಡಾಯಿಸಿರುವ ಹಿಂದೂಪರ ಸಂಘಟನೆ ಮುಖಂಡರು, ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.


