
ಪ್ರಗತಿವಾಹಿನಿ ಸುದ್ದಿ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಧಾರವಾಡದ ನಗರದ ಶ್ರೀನಗರ ಸರ್ಕಲ್ ನಲ್ಲಿ ಉದ್ಯೋಗಾಂಕ್ಷಿಗಳು ಪ್ರತಿಭಟನಾ ರ್ಯಾಲಿ ನಡೆಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ಮೆರವಣಿಗೆಗೆ ಅವಕಾಶ ನಿರಾಕರಿಸಿದ್ದಾಗ್ಯೂ ಜನಸಾಮಾನ್ಯರ ವೇದಿಕೆಯಿಂದ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು.
ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಹಾಗೂ ಅನುಮತಿ ಇಲ್ಲದಿದ್ದರೂ ಪ್ರತಿಭಟನೆ ನಡೆಸಿದ ಕಾರಣಕ್ಕೆ ಹಲವು ಪ್ರತಿಭಟನಾಕಾರರನು ಪೊಲೀಸರು ವಶಕ್ಕೆ ಪಡೆದಿದ್ದಾರೆ.




