Kannada NewsKarnataka NewsPolitics

*ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ: ಡಿ.ಕೆ. ಸುರೇಶ್*

ಪ್ರಗತಿವಾಹಿನಿ ಸುದ್ದಿ: “ಎಲ್ಲವೂ ಸುಸೂತ್ರವಾಗಿ ಆಗುತ್ತಿದ್ದು, ಒಂದು ಹಂತಕ್ಕೆ ಬರಲಿದೆ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಸಿಎಂ ಬದಲಾವಣೆ ವಿಚಾರವಾಗಿ ನೀವು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದೀರಾ ಎಂದು ಕೇಳಿದಾಗ, “ನನ್ನ ಖಾಸಗಿ ಭೇಟಿ ಬಗ್ಗೆ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಉಪಾಹಾರ ಕೂಟ ನಡೆದಿದ್ದು, ಮಂಗಳವಾರವೂ ಒಂದು ಉಪಾಹಾರಕೂಟ ನಡೆಯಲಿದೆ.” ಎಂದರು.

ಇಬ್ಬರೂ ನಾಯಕರು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ” ಎಂದು ತಿಳಿಸಿದರು.

Home add -Advt

ಸಹೋದರನ ಮೂಲಕ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಇದನ್ನು ನೀವು (ಮಾಧ್ಯಮ) ಹೇಳುತ್ತಿದ್ದೀರಿ” ಎಂದರು.

ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಬಾರದು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಇದಕ್ಕೆ ರಾಜಕೀಯವಾಗಿ ಉತ್ತರ ಕೊಡುವುದಕ್ಕಿಂತ, ಯಾರು ಯಾವ ಸಂದರ್ಭದಲ್ಲಿ ಮಠವನ್ನು ಹೇಗೆ ಬಳಸಿಕೊಂಡಿದ್ದಾರೆ ಎಂಬುದು ಜನರಿಗೆ ಗೊತ್ತಿದ್ದು, ನಾನು ಹೆಚ್ಚಾಗಿ ಹೇಳುವ ಅಗತ್ಯವಿಲ್ಲ” ಎಂದು ತಿಳಿಸಿದರು.

Related Articles

Back to top button