Belagavi NewsBelgaum NewsKannada NewsKarnataka NewsNationalPolitics

*ಪುರಸಭೆ ಅಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಪುರಸಭೆಗೆ ಮುತ್ತಿಗೆ ಹಾಕಿ ವರ್ತಕರು, ವ್ಯಾಪಾರಸ್ಥರು, ಅಂಗಡಿಕಾರರು ಪುರಸಭೆ ಮುಖ್ಯಾಧಿಕಾರಿ, ಕಿರಿಯ ಆರೋಗ್ಯ ಸಹಾಯಕ ನಿರೀಕ್ಷಕ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ಇಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿನ ಅಂಗಡಿ- ಮುಂಗಟ್ಟುಗಳನ್ನು ಸ್ವಯಂ ಬಂದ್ ಮಾಡಿ, ಮುಖ್ಯಾಧಿಕಾರಿ ವಿರೇಶ ಹಸಬಿ, ಕಿರಿಯ ಆರೋಗ್ಯ ಸಹಾಯಕ ನಿರೀಕ್ಷಕ ಸುರೇಶ ಪಾಟೀಲ್ ವಿರುದ್ಧ ಆಕ್ರೋಶ ಹೊರ ಹಾಕಲಾಗಿದೆ.‌ 

Home add -Advt

ದಂಡಪದ ರೂಪದಲ್ಲಿ ಲಕ್ಷಾಂತರ ರೂಪಾಯಿ ಹಣ ಪಡೆದು ಸೂಲಿಗೆ ಮಾಡಲಾಗುತ್ತಿದೆ. ಬೀದಿ ಬದಿಯ ವ್ಯಾಪಾರಸ್ಥರಿಗೆ, ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಪ್ರತಿನಿತ್ಯ ಹಣ ನೀಡುವಂತೆ ಕಿರುಕುಳ ಕೋಡುತ್ತಿದ್ದಾರೆ. ಹಾಗಾಗಿ ಈ ಕೂಡಲೇ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ಕಾರಣ ಕೆಲ ಕಾಲ ಸಂಚಾರದಲ್ಲಿ ವ್ಯತಯ ಉಂಟಾಯಿತು.

Related Articles

Back to top button