Belagavi NewsBelgaum NewsKannada NewsKarnataka NewsNationalPolitics
*ಬೆಳಗಾವಿ ಜಿಲ್ಲೆ ವಿಭಜನೆ: ಗೋಕಾಕ ಬಂದ್ ಮಾಡಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾ ವಿಭಜನೆ ಮಾಡಿ, ಚಿಕ್ಕೋಡಿ, ಗೋಕಾಕ, ಬೈಲಹೊಂಗಲ ಜಿಲ್ಲೆ ಪ್ರತ್ಯೇಕ ಜಿಲ್ಲೆಗಳಾಗಿ ರಚನೆ ಮಾಡಬೇಕು ಎಂದು ಹೋರಾಟ ನಡೆಯುತ್ತಲೇ ಇದೆ. ಡಿ.8 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಮತ್ತೆ ಜಿಲ್ಲಾ ವಿಭಜನೆ ಕೂಗು ಜೋರಾಗಿದೆ.
ಗೋಕಾಕ್ ಜಿಲ್ಲೆ ರಚನೆಗೆ ಹೋರಾಟ ತೀವ್ರಗೊಂಡಿದ್ದು, ಇಂದು ಗೋಕಾಕ ಜಿಲ್ಲೆಗಾಗಿ ಆಗ್ರಹಿಸಿ ಗೋಕಾಕ್ ನಗರ ಬಂದ್ ಗೆ ಕರೆ ನಿಡಲಾಗಿದೆ.
ವಿವಿಧ ಸಂಘಟನೆಗಳು, ಸ್ವಾಮೀಜಿಗಳು ಸೇರಿದಂತೆ ಸಾವಿರಾರು ಜನ ಪ್ರತಿಭಟನೆ ನಡೆಸಿದ್ದಾರೆ. ಗೋಕಾಕ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಹೋರಾಟಗಾರರು ಆಕ್ರೋಶ ಹೊರ ಹಾಕಿದ್ದಾರೆ. ಗೋಕಾಕ್ ನಗರ ಬಂದ್ ಕರೆ ಹಿನ್ನೆಲೆ ಅಂಗಡಿಗಳು ಬಂದ್ ಆಗಿವೆ.



