Kannada NewsKarnataka NewsLatest
*ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಡೀಪ್ ಫೇಕ್ ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳು*

FIR ದಾಖಲು
ಪ್ರಗತಿವಾಹಿನಿ ಸುದ್ದಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೂ ಡೀಪ್ ಫೇಕ್ ಕಾಟ ಶುರುವಾಗಿದೆ. ಕಿಡಿಗೇಡಿಗಳು ನಿರ್ಮಲಾ ಸೀತಾರಾಮನ್ ಅವರ ಡೀಪ್ ಫೇಕ್ ವಿಡೀಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಈ ಹಿಂದೆ ನಟ, ನಟಿಯರ ಫೋಟೋಗಳನ್ನು ಡೀಪ್ ಫೇಕ್ ಮಾಡಿ ಸೋಷಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡುತ್ತಿದ್ದ ಕಿಡಿಗೇಡಿಗಳು ಈಗ ಕೇಂದ್ರ ವಿತ್ತ ಸಚಿವರನ್ನೂ ಟಾರ್ಗೆಟ್ ಮಾಡಿದ್ದಾರೆ. ಸಚಿವೆ ನಿರ್ಮಲಾ ಸೀತಾರಾಮನ್ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಬೆಂಗಳೂರಿನ ಮಲ್ಲೇಶ್ವರಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಯೋಜನೆಗಳ ಕುರಿತು ಮಾತನಾಡಿದ ವಿಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸುಳ್ಳು ಡೀಫ್ ಫೇಕ್ ವಿಡಿಯೋ ಮಾಅಡಿ ಸಾರ್ವಜನಿಕರಿಗೆ ಪ್ರಚೋದನೆ ನೀಡಿದ್ದಾರೆ ಎಂದು ದೂರು ದಾಖಲಾಗಿದೆ.



