*ಡಿಸೆಂಬರ್ 10 ರಂದು ಬೆಳಗಾವಿಯಲ್ಲಿ ಮೌನ ಪ್ರತಿಭಟನೆ: ಜಯಮೃತ್ಯುಂಜಯ ಶ್ರೀ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಳೆದ ವರ್ಷ ಅಧಿವೇಶನ ಸಂಧರ್ಬದಲ್ಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಪಂಚಮಸಾಲಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಖಂಡಿಸಿ ಡಿಸೆಂಬರ್ 10 ರಂದು ಬೆಳಗಾವಿಯಲ್ಲಿ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಚಿಕ್ಕೋಡಿ ಪಟ್ಟಣದ ನ್ಯಾಯವಾದಿ ಮಹಾದೇವ ಈಟಿಯವರ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಲಾಠಿ ಚಾರ್ಜ್ ಗೆ 1 ವರ್ಷ ಪೂರೈಕೆಯಾದ ಹಿನ್ನೆಲೆಯಲ್ಲಿ ಈ ಘಟನೆ ಖಂಡಿಸಿ ಮೌನ ಪ್ರತಿಭಟನೆ ನಡೆಯಲಿದೆ. ಅವರು ಪಂಚಮಸಾಲಿಗಳ ಮೇಲಿನ ಹಲ್ಲೆ ಮರೆಯಲಾಗದು. ಡಿಸೆಂಬರ್ 10 ರಂದು ಲಿಂಗಾಯತರ ಮೇಲಿನ ದೌರ್ಜನ್ಯ ದಿನವನ್ನಾಗಿ ಆಚರಣೆ ಮಾಡಲಾಗುವುದು ಎಂದರು.
ಗಾಂಧಿ ಭವನದಿಂದ ಮೌನ ರ್ಯಾಲಿ ಮಾಡಲಾಗುವುದು. ಕೈಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ಮಾಡಲಾಗುವುದು. ಇದುವರೆಗೆ ಯಾವುದೇ ಸರ್ಕಾರ ಲಿಂಗಾಯತರ ಮೇಲೆ ದೌರ್ಜನ್ಯ ಮಾಡಿಲ್ಲ.ಆದ್ರೆ ಈ ಸರ್ಕಾರ ಲಿಂಗಾಯತರ ಮೇಲೆ ದೌರ್ಜನ್ಯ ಮಾಡಿದೆ. ಡಿಸೆಂಬರ್ 10 ರ ಪ್ರತಿಭಟನೆಗೆ ಸಮಾಜದ ಬಾಂಧವರು ಭಾಗವಹಿಸಬೇಕು ಹಾಗೂ 2 ಎ ಮೀಸಲಾತಿಗಾಗಿ ನಮ್ಮ ಹೋರಾಟ ನಿರಂತರವಾಗಲಿದೆ ಎಂದರು.


