Kannada NewsLatestNationalPoliticsWorld
*BREAKING: ಭಾರತಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್: ಏರ್ ಪೋರ್ಟ್ ಗೆ ತೆರಳಿ ಖುದ್ದು ಸ್ವಾಗತಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.
ರಷ್ಯಾದಿಂದ ವಿಶೇಷ ವಿಮಾನದಲ್ಲಿ ದೆಹಲಿಯ ಪಾಲಂ ಏರ್ ಪೋರ್ಟ್ ಗೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿಯವರು ಏರ್ ಪೋರ್ಟ್ ಗೆ ತೆರಳಿ ಆತ್ಮೀಯವಾಗಿ ಸ್ವಾಗತಿಸಿದರು.
ನವದೆಹಲಿಯಲ್ಲಿ ನಡೆಯಲಿರುವ 23ನೇ ಭಾರತ ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮಿಸಿದ್ದಾರೆ. 2022ಉಕ್ರೇನ್ ವಿರುದ್ಧ ಯುದ್ಧದ ಬಳಿಕ ವ್ಲಾಡಿಮಿರ್ ಪುಟಿನ್ ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ರಷ್ಯಾ ಅಧ್ಯಕ್ಷರ ಭಾರತ ಭೇಟಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರಿ ಮಹತ್ವ ಹಾಗೂ ಕುತೂಹಲ ಮೂಡಿಸಿದೆ.


