*ಪಿಹೆಚ್ ಡಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ: ಸಿಂಡಿಕೇಟ್ ಸಭೆಯಲ್ಲಿ ಮಹತ್ವದ ನಿರ್ಧಾರ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪಿಹೆಚ್ ಡಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ವಿದ್ಯಾಲಯದ ಕುಲಪತಿ ತ್ಯಾಗರಾಜ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಪಿಹೆಚ್ ಡಿ ಪದವಿ ನೀಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ಬೆನ್ನಲ್ಲೇ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ಸಿಂಡಿಕೇಟ್ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ, ಪಿಹೆಚ್ ಡಿ ಪದವಿಗೆ ಅರ್ಹರಾಗಿದ್ದಾರೆ. ಹೀಗಾಗಿ ನಿಯಮಾನುಸಾರ ಅರ್ಜಿ ಸಲ್ಲಿಸಿದರೆ ಪಿಹೆಚ್ ಡಿ ಪದವಿ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನು ಕುರುಕುಳ ಆರೋಪ ಹಿನ್ನೆಲೆಯಲ್ಲಿ ಪ್ರಾಧ್ಯಾಪಕ ಕೆ.ಎಲ್.ಎಸ್.ಮೂರ್ತಿ ಅವರಿಗೆ ಕಡ್ದಾಯ ನಿವೃತ್ತಿಗೆ ಆದೇಶ ನೀಡಲಾಗಿದೆ ಎಂದರು. ವಿದ್ಯಾರ್ಥಿಗಳ ಜೊತೆ ಯಾವ ರೀತಿ ನಡೆದುಕೊಳ್ಳಬೇಕು ಎಂಬ ಬಗ್ಗೆ ನಿಯಮವಿದೆ. ಇದನ್ನು ಪಾಲಿಸದ ಕಾರಣಕ್ಕೆ ಅವರಿಗೆ ಕಡ್ದಾಯ ನಿವೃತ್ತಿ ನೀಡಲಾಗುವುದು ಎಂದರು.



