Belagavi NewsBelgaum NewsCrimeKannada NewsKarnataka NewsLatest

*ಕಾರಿಗೆ ಬೆಂಕಿ: ಬೆಂದು ಹೋದ ಪೋಲಿಸ್ ಅಧಿಕಾರಿ*

ಪ್ರಗತಿವಾಹಿನಿ ಸುದ್ದಿ, ಧಾರವಾಡ: ಅಣ್ಣಿಗೇರಿ ಬಳಿ ಸಂಭವಿಸಿದ ಭೀಕರ ಅವಘಡದಲ್ಲಿ ಪೊಲೀಸ್ ಅಧಿಕಾರಿಯೋರ್ವರು ಬೆಂದುಹೋಗಿದ್ದಾರೆ.

ಮದುವೆ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಸಂದರ್ಭದಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿ ಪಂಚಾಕ್ಷರಿ ಸಾಲಿಮಠ ಸುಟ್ಟು ಕರಕಲಾಗಿದ್ದಾರೆ.

ಜೊತೆಗೆ ಕಾರಿನ ಚಾಲಕ ಕೂಡ ಸುಟ್ಟು ಹೋಗಿದ್ದಾರೆ.

ಸಂತಾಪ: ಸಾಲಿಮಠ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Home add -Advt

ಮುರಗೋಡ್ ಗ್ರಾಮದ ಪೊಲೀಸ್ ಅಧಿಕಾರಿ ಪಂಚಾಕ್ಷರಿ ಸಾಲಿಮಠ್ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ತಿಳಿದು, ಮನಸ್ಸಿಗೆ ನೋವಾಯಿತು.

ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಯನ್ನು ಕಳೆದುಕೊಂಡಿದ್ದು ಪೋಲಿಸ್ ಇಲಾಖೆಗೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟ.

ಪಂಚಾಕ್ಷರಿ ಅವರು ಈ ಹಿಂದೆ ಬೈಲಹೊಂಗಲ, ಗದಗ ಹಾಗೂ ಹುಬ್ಬಳ್ಳಿ ಸೇರಿದಂತೆ ರಾಜ್ಯ ವಿವಿಧ ಭಾಗಗಳಲ್ಲಿ ಕಾರ್ಯ ನಿರ್ವಹಿಸಿದ್ದರು.

ಭಗವಂತ ಮೃತರ ಆತ್ಮಕ್ಕೆ ಶಾಂತಿ‌ ನೀಡಲಿ, ಅವರ ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

  • ಲಕ್ಷ್ಮೀ ಹೆಬ್ಬಾಳಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು

Related Articles

Back to top button