
ಪ್ರಗತಿವಾಹಿನಿ ಸುದ್ದಿ: ಸಿಗರೇಟ್ ಪ್ಯಾಕೇಟ್, ಮಾದಕ ವಸ್ತುಗಳು ಸೇರಿದಂತೆ ನಿಷೇಧಿತ ವಸ್ತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನ ವಾರ್ಡರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ರಾಹುಲ್ ಪಾಟೀಲ್ ಬಂಧಿತ ವಾರ್ಡರ್. ಜೈಲು ಅಧೀಕ್ಷಕ ಪರಮೇಶ್ ಅವರ ದೂರು ಆಧರಿಸಿ ರಾಹುಲ್ ಪಟೇಲ್ ನನ್ನು ಬಂಧಿಸಲಾಗಿದೆ. 2018ರಲ್ಲಿ ವಾರ್ಡರ್ ಆಗಿ ಕಾರಾಗೃಹ ಇಲಾಖೆಗೆ ಸೇರ್ಪಡೆಯಾಗಿದ್ದ ರಾಹುಲ್, ಈ ಹಿಂದೆ ಬೆಳಗಾವಿ ಕಾರಾಗೃಹದಲ್ಲಿ ಸೇವೆ ಸಲ್ಲಿಸಿದ್ದ. ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಾರ್ಡರ್ ಆಗಿ ಕೆಲಸ ಮಾಡುತ್ತಿದರು.
ಎಂದಿನಂತೆ ಕೆಲಸಕ್ಕೆ ಆಗಮಿಸಿದ್ದ ರಾಹುಲ್ ನನ್ನು ತಪಾಸಣೆ ನಡೆಸಿದಾಗ ಎರಡು ಸಿಗರೇತ್ ಪ್ಯಾಕ್, 60 ಗ್ರಾಂ ಮಾದಕ ವಸ್ತುಗಳು ಪತ್ತೆಯಾಗಿವೆ. ಸಿಬ್ಬಂದಿ ಈ ಬಗ್ಗೆ ಜೈಲಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ವಾರ್ಡರ್ ರಾಹುಲ್ ನನ್ನು ಬಂಧಿಸಲಾಗಿದೆ.


