Kannada NewsKarnataka NewsLatest
*ಪುಟ್ಟ ಬಾಲಕಿಗೆ ಲೈಂಗಿಕ ಕಿರುಕುಳ: ಶರಣಾಗಲು ಬರುತ್ತಿದ್ದ ಆರೋಪಿಯನ್ನು ಹಿಡಿದು ಹಿಗ್ಗಮುಗ್ಗಾ ಥಳಿಸಿದ ಗ್ರಾಮಸ್ಥರು*

ಪ್ರಗತಿವಾಹಿನಿ ಸುದ್ದಿ: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಗ್ರಾಮಸ್ಥರು ಹಿಡಿದು ಮನಬಂದಂತೆ ಥಳಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಕಾಮುಕನನ್ನು ಅಡ್ಡಗಟ್ಟಿದ ಗ್ರಾಮಸ್ಥರು ತಲೆಗೊಬ್ಬರಂತೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ಲೋಕೇಶ್ ಬಂಧಿತ ಆರೋಪಿ.
ಡಿಸೆಂಬರ್ 3ರಂದು 9 ವರ್ಷದ ಬಾಲಕಿಗೆ ಕಾಮುಕ ಲೈಂಗಿಕ ಕಿರುಕುಳ ನೀಡಿದ್ದ. ಪೋಷಕರು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇಂದು ಆರೋಪಿ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಲು ಮುಂದಾಗಿದ್ದಾನೆ. ಪೊಲೀಸ್ ಠಾಣೆಯತ್ತ ಹೋಗುತ್ತಿದ್ದ ಆರೋಪಿಯನ್ನು ಹಿಡಿದ ಗ್ರಾಮಸ್ಥರು ನಡುರಸ್ತೆಯಲ್ಲಿಯೇ ಆತನಿಗೆ ಧರ್ಮದೇಟು ನೀಡಿದ್ದಾರೆ. ಬಳಿಕ ಬಿಳಿಕೆರೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.




