Belagavi NewsBelgaum NewsKannada NewsKarnataka NewsLatest

*BREAKING: ಬೆಳಗಾವಿಯಲ್ಲಿ ಹೈ ಅಲರ್ಟ್ ಘೋಷಣೆ*

ಗುಪ್ತಚರ ಇಲಾಖೆ ಸೂಚನೆ ಬೆನ್ನಲ್ಲೇ ಕಟ್ಟೆಚ್ಚರ


ಪ್ರಗತಿವಾಹಿನಿ ಸುದ್ದಿ: ಗುಪ್ತಚರ ಇಲಾಖೆ ಸೂಚನೆ ಮೇರೆಗೆ ಬೆಳಗಾವಿ ನಗರದಾದ್ಯಂತ ಹೈಅಲರ್ಟ್ ಘೋಷಿಸಿಸಲಾಗಿದೆ. ದೆಹಲಿಯ ಕೆಂಪುಕೋಟೆ ಬಳಿ ಉಗ್ರರು ಕಾರ್ ಬಾಂಬ್ ಸ್ಫೋಟ ನಡೆಸಿದ ಪ್ರಕರಣದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಬೆಳಗಾವಿ ಅಧಿವೇಶನದಲ್ಲಿಯೂ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಹಾಗೂ ವಿಧಾನಮಂಡಲ ಅಧಿವೇಶನ ನಡೆಯುವ ಸುವರ್ಣಸೌಧದ ಸುತ್ತ ಕಟ್ಟೆಚ್ಚರ ಘೋಷಿಸಲಾಗಿದೆ.

ನಾಳೆಯಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ಈ ನಿಟ್ಟಿನಲ್ಲಿ ಬೆಳಗಾವಿ ನಗರದಲ್ಲೊ ಹೈಲರ್ಟ್ ಘೋಷಿಸಲಾಗಿದ್ದು, ಹೆಚ್ಚುವರಿಯಾಗಿ 6000 ಪೊಲೀಸರನ್ನು ನಿಯೋಜಿಸಲಾಗಿದೆ.

Home add -Advt

ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ನೇತೃತ್ವದಲ್ಲಿ ಆರು ಎಸ್ ಪಿ ರ್ಯಾಂಕ್ ಮಟ್ಟದ ಪೊಲೀಸ್ ಅಧಿಕಾರಿಗಳು, 146 ಹಿರಿಯ ಪೊಲೀಸ್ ಅಧಿಕಾರಿಗಳು, 3820 ಪೊಲೀಸ್ ಸಿಬ್ಬಂದಿಗಳು, 500ಮ್ ಗಾರ್ಡ್ ಗಳು, 8 ಕ್ಷಿಪ್ರ ಕಾರ್ಯಪಡೆ, 10ಡಿಎ ಆರ್ ತುಕಡಿ, 35ಕೆ.ಎಸ್.ಆರ್.ಪಿ ತುಕಡಿ, 1 ಬಿಡಿಡಿಎಸ್ ತಂಡ, 1 ಗರುಡಾ ಪೊಲೀಸ್, 16 ವಿಧ್ವಂಸಕ ಕೃತ್ಯ ತಪಾಸಣೆ ತಂಡ ನಿಯೋಜಿಸಲಾಗಿದೆ.

ಅಧಿವೇಶನ ನಡೆಯುವ ಸುವರ್ಣಸೌಧದ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಎಲ್ಲೆಡೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು ಹದ್ದಿನ ಕಣ್ಣಿಟ್ಟಿದ್ದಾರೆ.

Related Articles

Back to top button