Kannada NewsKarnataka NewsLatest

*ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿ ರಸ್ತೆ ಪಕ್ಕದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಇಲ್ಲಿನ ನಾಗಮಂಗಲ ಬಳಿಯ ನಾಗತಿಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಚನ್ನೇಗೌಡ (60), ಸರೋಜಮ್ಮ (55) ಹಾಗೂ ಜಯಮ್ಮ(70) ಎಂದು ಗುರುತಿಸಲಾಗಿದೆ.

ಮೂವರೂ ಚಿಕ್ಕಮಗಳೂರು ಮೂಲದವರಾಗಿದ್ದು, ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕಾರಿನಲ್ಲಿ ಹೋಗುತ್ತಿದದಗ ಅಪಘಾತ ಸಂಭವಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button