
ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಡಿ. 11ರವರೆಗೂ ಕರ್ನಾಟಕದಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಈಗಾಗಲೇ ರಾಜ್ಯದಲ್ಲಿ ಚಳಿ ಹೆಚ್ಚಾಗಿದ್ದು, ಚಳಿ ನಡುವೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಶಿವಮೊಗ್ಗ ಬೀದರ್, ಮಂಡ್ಯ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




