
ಪ್ರಗತಿವಾಹಿನಿ ಸುದ್ದಿ: ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಮರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಗೆಲುವನ್ನು ಪ್ರಶ್ನಿಸಿ ಕೆ.ಶಂಕರ್ ಎನ್ನುವವರು ಸಲ್ಲಿಸಿಇದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಮ್ ಕೋರ್ಟ್ ದ್ವಿಸದಸ್ಯ ಪೀಠ, ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ಸಿದ್ದರಾಮಯ್ಯನವರ ಶಾಸಕತ್ವ ಅಸಿಂಧುಗೊಳಿಸುವಂತೆ ಕೋರಿ ವರುಣಾ ಹೋಬಳಿಯ ಶಂಕರ್ ಹೈಕೋಎಟ್ ಮೆಟ್ಟಿಲೇರಿದ್ದರು. ಚುನಾವಣಾ ಪ್ರಚಾರದ ವೇಳೆ ಗ್ಯಾರಂಟಿಗಳನ್ನು ಘೋಷಿಸುವುದು ಮತದಾರರ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿ ಅದು ಆಮಿಷವಾಗಿದೆ ಎಂದು ಆರೋಪಿಸಿದ್ದರು. ಆದರೆ ಚುನಾವಣಾ ಪೂರ್ವದಲ್ಲಿ ರಾಜಕೀಯ ಪಕ್ಷಗಳಿಂದ ಆಶ್ವಾಸನೆಗಳನ್ನು ನೀಡಲು ಅವಕಾಶವಿದೆ ಎಂದು ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮಕುಮಾರ್ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್, ಶಂಕರ್ ಅವರ ಅರ್ಜಿ ವಜಾಗೊಳಿಸಿತ್ತು. ಈ ನಿಟ್ಟಿನಲ್ಲಿ ಶಂಕರ್ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.




