*ಚುನಾವಣಾ ಅಕ್ರಮ: ಸಚಿವ ಪ್ರೀಯಾಂಕ್ ಖರ್ಗೆಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಲಬುರಗಿಯ ಚಿತ್ತಾಪುರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು ಈ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಪ್ರಕರಣದಲ್ಲಿ ಈಗಾಗಲೇ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಶ್ವತ್ಥರಾಮ್ ರಾಥೋಡ್ ಎಂಬ ವ್ಯಕ್ತಿ ಮೇಲ್ಮನವಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ನಲ್ಲಿ ಈ ಅರ್ಜಿಯ ವಿಚಾರಣೆ ನಡೆದಿದೆ. ಎ ವೇಳೆ ರಾಜ್ಯ ಚುನಾವಣ ಆಯೋಗ ಮತ್ತು ಪ್ರಿಯಾಂಕ್ ಖರ್ಗೆಗೆ ಸಂಬಂಧ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ.
ಚುನಾವಣಾ ಆಯೋಗಕ್ಕೆ ದಾಖಲೆಗಳನ್ನು ನೀಡುವ ವೇಳೆ ಪ್ರಿಯಾಂಕ್ ಖರ್ಗೆ ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ನೀಡಿ ಅಕ್ರಮ ಎಸಗಿದ್ದಾರೆ. ಜೊತೆಗೆ ಉಚಿತ ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ಚುನಾವಣೆಯಲ್ಲಿ ಗೆದ್ದಿರುವ ಪ್ರಿಯಾಂಕ್ ಖರ್ಗೆ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.




