*ಸುವರ್ಣಸೌಧ ಮುತ್ತಿಗೆಗೆ ರೈತರ ಯತ್ನ: ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಳಗಾವಿಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ನಿಟ್ಟಿನಲ್ಲಿ ರೈತರು ಮುಂದಾಗಿದ್ದಾರೆ.
ಭೂಸ್ವಾಧೀನ ಕಾಯ್ದೆ ವಿರೊಧ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಬೆಳಿಗ್ಗೆಯಿಂದ ಸುವರ್ಣ ಗಾರ್ಡನ್ ಬಳಿ ಪ್ರತ್ಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ಕೃಷಿ ಸಚಿವರು, ಕಂದಾಯ ಸಚಿವರು ಬಂದು ರೈತರ ಅಹವಾಲು ಸ್ವೀಕರಿಸುವಂತೆ ಒತ್ತಾಯಿಸಿದ್ದರು. ಆದರೆ ಯಾವುದೇ ಸಚಿವರು ಸ್ಥಳಕ್ಕಾಗಮಿಸಿಲ್ಲ ಇದರಿಂದ ರೊಚ್ಚಿಗೆದ್ದ ರೈತರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.
ಮೊದಲಿಗೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿ ಕೆಲ ಕಾಲ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಪೊಲೀಸರ ಕಣ್ತಪ್ಪಿಸಿ ಸುವರ್ಣಸೌಧದತ್ತ ಮುನ್ನುಗ್ಗಿದಾರೆ. ಈ ವೇಳೆ ಪೊಲೀಸರು ರೈತರನ್ನು ತಡೆದಿದ್ದು, ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.


