
ಪ್ರಗತಿವಾಹಿನಿ ಸುದ್ದಿ: ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 12 ಜನರು ಸಜೀವ ದಹನವಾಗಿರುವ ಘಟನೆ ಚೀನಾದಲ್ಲಿ ನಡೆದಿದೆ.
ಚೀನಾದ ಗುವಾಂಗ್ ಡಾಂಗ್ ಪ್ರಾಂತ್ಯದ ಶಾಂಟೌ ಎಂಬಲ್ಲಿ ಈ ದುರಂತ ಸಂಭವಿಸಿದೆ. 12 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ನಾಲ್ಕು ಅಂತಸ್ತಿನ ವಸತಿ ಕಟ್ಟದಲ್ಲಿ ಬೆಂಕಿ ದುರಂತ ಸಂಭವಿಸಿದೆ.




