Belagavi NewsBelgaum NewsKannada NewsKarnataka NewsPolitics

*ಬೆಳಗಾವಿಯಲ್ಲಿ ಡಿಕೆಶಿ ಗೇಮ್: ಹಲವು ಶಾಸಕರು, ಸಚಿವರ ಜೊತೆ ಡಿನ್ನರ್ ಮೀಟಿಂಗ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಡೀ ಸರ್ಕಾರ ಬೆಳಗಾವಿಗೆ ಆಗಮಿಸಿದೆ. ಬೆಂಗಳೂರಿನಲ್ಲಿ ನಡೆಯುತ್ತಿದ್ದ ಡಿನ್ನರ್ ಮಿಟಿಂಗ್ ಬೆಳಗಾವಿಗೆ ಶಿಪ್ಟ್ ಆಗಿದೆ.‌

ಬುಧವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಆಪ್ತರು ನಡೆಸಿದ ಡಿನ್ನರ್ ಸಭೆಯ ಬೆನ್ನಲ್ಲೇ, ಡಿಸಿಎಂ ಡಿಕೆ ಶಿವಕುಮಾರ್ ( ಗುರುವಾರ ರಾತ್ರಿ ಆಪ್ತರಿಗಾಗಿ ವಿಶೇಷ ಡಿನ್ನರ್ ಮೀಟಿಂಗ್ ಆಯೋಜಿಸಿದ್ದಾರೆ. 

ಬೆಳಗಾವಿ ಹೊರವಲಯದಲ್ಲಿರುವ ದೊಡ್ಡಣ್ಣವರ್ ಫಾರ್ಮ್‌ಹೌಸ್‌ನಲ್ಲಿ ನಡೆದ ಈ ಡಿನ್ನರ್ ಸಭೆಯಲ್ಲಿ ಐವರು ಸಚಿವರು ಸೇರಿ 30ಕ್ಕೂ ಹೆಚ್ಚು ಶಾಸಕರು ಭಾಗಿಯಾಗಿದ್ದಾರೆ. ಈ ಡಿನ್ನರ್ ಮೀಟಿಂಗ್​ಗೆ ಡಿಸಿಎಂ ಆಪ್ತ ಹಾಗೂ ಖ್ಯಾತ ಮೈನಿಂಗ್ ಉದ್ಯಮಿ ದೊಡ್ಡಣ್ಣವರ್ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಅವರ ಆತಿಥ್ಯದಲ್ಲಿ ಸಭೆ ಜರುಗಿದೆ.

ಸಚಿವರಾದ ಎಂ.ಸಿ. ಸುಧಾಕರ್, ಮಂಕಾಳು ವೈದ್ಯ, ಕೆ.ಹೆಚ್. ಮುನಿಯಪ್ಪ, ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಅನೇಕ ಶಾಸಕರು ಸಭೆಗೆ ಹಾಜರಾಗಿದ್ದಾರೆಂದು ಎನ್ನಲಾಗಿದೆ.

Home add -Advt

ಬುಧವಾರ ರಾತ್ರಿ ಮಾಜಿ ಶಾಸಕ ಫಿರೋಜ್ ಸೇಠ್ ಅವರ ನಿವಾಸದಲ್ಲಿ ನಡೆದ ಭೋಜನ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ವಲಯದ ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು. ಆದರೆ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅವರ ಬಣದ ಯಾವೊಬ್ಬ ಶಾಕರೂ ಭಾಗವಹಿಸಿರಲಿಲ್ಲ. ಇದೀಗ ಡಿಸಿಎಂ ಬಣ ಪ್ರತ್ಯೇಕ ಡಿನ್ನರ್ ಮೀಟಿಂಗ್ ನಡೆಸಿರುವುದು ಕುತೂಹಲಕ್ಕೆ ಕಾರಣವಾಗದೆ.

ಡಿಕೆ ಶಿವಕುಮಾರ್ ಅವರ ಡಿನ್ನರ್ ಮೀಟಿಂಗ್‌ನಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಸಚಿವ ಶರಣ ಪ್ರಕಾಶ್ ಪಾಟೀಲ್, ಸಚಿವ ಎಂ.ಸಿ.ಸುಧಾಕರ್, ಸಚಿವ ಮಂಕಾಳು ವೈದ್ಯ, ಕೂಡ್ಲಿಗಿ ಶಾಸಕ ಎನ್.ಟಿ. ಶ್ರೀನಿವಾಸ್, ಕುಣಿಗಲ್ ಶಾಸಕ ಡಾ.ಹೆಚ್.ಡಿ.ರಂಗನಾಥ್, ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್, ಶೃಂಗೇರಿ ಶಾಸಕ ಟಿ,ಡಿ.ರಾಜೇಗೌಡ, ಪುಲಕೇಶಿನಗರ ಶಾಸಕ ಎ.ಸಿ.ಶ್ರೀನಿವಾಸ್, ಮಾಲೂರು ಶಾಸಕ ಕೆ.ಎನ್.ನಂಜೇಗೌಡ, ಆನೇಕಲ್ ಶಾಸಕ ಆನೇಕಲ್ ಶಿವಣ್ಣ, ಕೋಲಾರ ಶಾಸಕ ಕೊತ್ತನೂರು ಮಂಜುನಾಥ್, ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ್ ಹುಕ್ಕೇರಿ, ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್, ಬಾದಾಮಿ ಶಾಸಕ ಭೀಮಸೇನ್ ಚಿಮ್ಮನಕಟ್ಟಿ, ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ಹಾನಗಲ್ ಶಾಸಕ ಶ್ರೀನಿವಾಸ ಮಾನೆ, ಪರಿಷತ್ ಸದಸ್ಯ ಚೆನ್ನರಾಜ್ ಹಟ್ಟಿಹೊಳಿ ಇದಲ್ಲದೇ ಬಿಜೆಪಿ ಉಚ್ಚಾಟಿತ ಶಾಸಕ ಎಸ್‌.ಟಿ ಸೋಮಶೇಖರ್ ಕೂಡ ಭಾಗಿಯಾಗಿದ್ದಾರೆ. ಇನ್ನು ಬಿಜೆಪಿಯ ಉಚ್ಚಾಟಿತ ಮತ್ತೊಬ್ಬ ಶಾಸಕರಾದ ಶಿವರಾಮ್ ಹೆಬ್ಬಾರ್ ಮೊದಲೇ ಬಂದು ವಾಪಸ್ ಆದರು ಎಂದು ತಿಳಿದುಂಬದಿದೆ.

ಜೊತೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಸಭೆಯ ಸಂಯೋಜನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅವರು ನಿನ್ನೆ ಬೆಳಗ್ಗೆಯೇ ಬೆಳಗಾವಿಗೆ ಆಗಮಿಸಿ ವ್ಯವಸ್ಥೆಗಳನ್ನು ಮೇಲ್ವಿಚಾರಣೆ ಮಾಡಿದ್ದರೆಂದು ತಿಳಿದು ಬಂದಿದೆ.

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆಯೇ ಡಿಕೆಶಿ ಕರೆದಿದ್ದ ಡಿನ್ನರ್ ಮೀಟಿಂಗ್‌ನಲ್ಲಿ ಹೆಚ್ಚು ಚರ್ಚೆಯಾಗಿದೆ. ಯತೀಂದ್ರಗೆ ನೋಟೀಸ್ ಕೊಡಿ ಎಂದು ಕೆಲ ಶಾಸಕರು ಡಿಕೆಶಿಗೆ ಒತ್ತಡ ಹಾಕಿದ್ದಾರೆ. ಈ ವೇಳೆ ಎಲ್ಲದಕ್ಕೂ ಸರಿಯಾಗಿ ಉತ್ತರ ಕೊಡುತ್ತೇನೆ, ಕಾಯಿರಿ ಎಂದು ಡಿಕೆಶಿ ತಿಳಿಸಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲ, ಮುಂದಿನ ವಾರ ಡಿಕೆಶಿ ಅವರನ್ನು ದೆಹಲಿಗೆ ಕರೆದಿರುವ ಬಗ್ಗೆ ಕೂಡ ಚರ್ಚೆಯಾಗಿದೆ. 

ಸಿಎಂ ಬದಲಾವಣೆ ವಿಚಾರ ಡಿನ್ನರ್ ಮೀಟಿಂಗ್‌ನಲ್ಲಿ ಚರ್ಚೆಯಾಗಿದ್ದು, ಅಗತ್ಯ ಬಿದ್ದರೆ ಹೈಕಮಾಂಡ್ ಭೇಟಿಗೆ ಹೋಗುತ್ತೇವೆ ಎಂದು ಕೆಲವು ಶಾಸಕರು ಡಿ.ಕೆ ಶಿವಕುಮಾರ್‌ಗೆ ತಿಳಿಸಿದ್ದಾರೆ. 

Related Articles

Back to top button