Kannada NewsLatestNationalPolitics
*ದೆಹಲಿಯಲ್ಲಿ ಬೀಡುಬಿಟ್ಟ ರಾಜ್ಯ ಕಾಂಗ್ರೆಸ್ ನಾಯಕರು: ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್*

ಪ್ರಗತಿವಾಹಿನಿ ಸುದ್ದಿ: ಮತಗಳ್ಳತನ ಪ್ರಕರಣ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಇಂದು ಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಉಪಹಾರ ಕೂಟ ನಡೆಸಿದರು.

ಸಚಿವರಾದ ಆರ್ ಬಿ ತಿಮ್ಮಾಪುರ, ಮಾಂಕಾಳ ವೈದ್ಯ, ಮಾಜಿ ಸಚಿವ ತನ್ವಿರ್ ಸೇಠ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಆನೇಕಲ್ ಶಿವಣ್ಣ, ಎ ಸಿ ಶ್ರೀನಿವಾಸ್, ಪ್ರದೀಪ್ ಈಶ್ವರ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ್, ಎಂಎಲ್ಸಿಗಳಾದ ಪುಟ್ಟಣ್ಣ, ಮಂಜುನಾಥ್ ಭಂಡಾರಿ, ವಸಂತಕುಮಾರ್, ಬಸನಗೌಡ ಬಾದರ್ಲಿ, ಶ್ರೀನಿವಾಸ್, ಮಾಜಿ ಎಂಎಲ್ಸಿ ಯು ಬಿ ವೆಂಕಟೇಶ್ ಮತ್ತಿತರರು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರೊಂದಿಗೆ ಕರ್ನಾಟಕ ಭವನದಲ್ಲಿ ಭಾನುವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಅವರ ಜತೆ ಡಿಸಿಎಂ ಅವರು ಉಪಾಹಾರ ಸೇವಿಸಿದರು.




