
ಪ್ರಗತಿವಾಹಿನಿ ಸುದ್ದಿ: ಪೊಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಉತ್ತರ ಕರ್ನಾಟಕದ ಖ್ಯಾತ ಜನಪದ ಹಾಡುಗಾರ, ಮ್ಯೂಸಿಕ್ ಮೈಲಾರಿಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣದಲ್ಲಿ ಮ್ಯೂಸಿಕ್ ಮೈಲಾರಿ ತಲೆಮರೆಸಿಕೊಂಡಿದ್ದ. ಮಹಾರಾಷ್ಟ್ರದತ್ತ ಎಸ್ಕೇಪ್ ಆಗುತ್ತಿದ್ದ ಮೈಲಾರಿಯನ್ನು ತಡ ರಾತ್ರಿ ಜತ್ತ ಬಳಿ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣದಲ್ಲಿ ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಕೇಸ್ ನ್ನು ಬಾಗಲಕೋಟೆ ಠಾಣೆಗೆ ವರ್ಗಾಯಿಸಲಾಗಿತ್ತು. ಮ್ಯೂಸಿಕ್ ಮೈಲಾರಿ ಸೇರಿ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಮೈಲಾರಿ ತಲೆಮರೆಸಿಕೊಂಡಿದ್ದ. ಇದೀಗ ಆತನನ್ನು ಬಂಧಿಸಲಾಗಿದೆ.



