Belagavi NewsBelgaum NewsKannada NewsKarnataka NewsLatest

*ವಿವಿಧ ವಸತಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವಿವಿಧ ವಸತಿ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ಸಹಾಯಧನ ಹೆಚ್ಚಿಸುವ ಮತ್ತು ಘಟಕ ವೆಚ್ಚ ಹೆಚ್ಚಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ವಸತಿ, ವಖ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪರವಾಗಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, 2024-2025 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ್ ಯೋಜನೆ(ಗ್ರಾ)ರಡಿ ಹಾಗೂ ರಾಜ್ಯ ಸರ್ಕಾರದ ವಸತಿ ಯೋಜನೆಗಳಡಿ ಮರು ಹಂಚಿಕೆ ಮಾಡಲಾದ 36,150 ಮನೆಗಳನ್ನು ಒಳಗೊಂಡಂತೆ ಒಟ್ಟಾರೆ 7,38,881 ಮನೆಗಳನ್ನು ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದ್ದು, 3,27,747 ಮನೆಗಳಿಗೆ ಮಂಜೂರಾತಿ ನೀಡಲಾಗಿದೆ ಎಂದರು.

ಅಲೆಮಾರಿ ಜನಾಂಗದವರಿಗೆ 2024-25ನೇ ಸಾಲಿನಲ್ಲಿ ಪ್ರತ್ಯೇಕವಾಗಿ ಗುರಿ ಹಂಚಿಕೆಯಾಗಿರುವುದಿಲ್ಲ. ಅಲೆಮಾರಿ ವರ್ಗದ ವಸತಿರಹಿತರನ್ನು ಒಳಗೊಂಡಂತೆ ಎಲ್ಲಾ ವಸತಿರಹಿತರಿಗೆ ವಸತಿ ಸೌಕರ್ಯ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

Home add -Advt


Related Articles

Back to top button