
ಪ್ರಗತಿವಾಹಿನಿ ಸುದ್ದಿ: ಶಾಲಾ ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ೫೮ ವರ್ಷದ ಸುಧಾರಾಣಿ ಎಂಬ ಶಿಕ್ಷಕಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಸುಧಾರಾಣಿ ದೊಡ್ಡಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.


