Belagavi NewsBelgaum NewsHealthKannada NewsKarnataka NewsNationalWorld

*ನಾಳೆಯಿಂದ ಪಲ್ಸ್ ಪೋಲೀಯೋ ಅಭಿಯಾನ ಆರಂಭ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಾಳೆಯಿಂದ ಡಿ. 24ರ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ–2025 ಆರಂಭವಾಗಲಿದ್ದು, ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಕರ್ನಾಟಕ ಆರೋಗ್ಯ ಇಲಾಖೆ ಪೋಷಕರಿಗೆ ಮನವಿ ಮಾಡಿದೆ.

ಪೋಲಿಯೋ ಮಾರಕರೋಗವಾಗಿದ್ದು, ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯವನ್ನು ಉಂಟುಮಾಡಬಹುದು. ಈ ರೋಗಕ್ಕೆ ಯಾವುದೇ ಚಿಕಿತ್ಸೆ ಇಲ್ಲದಿದ್ದರು ಲಸಿಕೆ ಮೂಲಕ ಇದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಿದೆ. ಎರಡು ಹನಿ ಲಸಿಕೆ ನಿಮ್ಮ ಮಗುವಿನ ಭವಿಷ್ಯವನ್ನು ನಿರ್ಧರಿಸಲಿದೆ ಎಂಬ ಘೋಷವಾಕ್ಯದಡಿ ಸರ್ಕಾರ ಅಭಿಯಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಹತ್ತಿರದ ಸರ್ಕಾರಿ ಆಸ್ಪತ್ರೆಗಳು, ಅಂಗನವಾಡಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಬಸ್​​​, ರೆಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಲಸಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮೊದಲ ದಿನ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಬಳಿಕ ಎರಡು ದಿನ ಆರೋಗ್ಯ ಇಲಾಖೆ ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ ಲಸಿಕೆ ಪಡೆಯದ ಮಕ್ಕಳಿಗೆ ಲಸಿಕೆ ನೀಡುತ್ತಾರೆ.

Home add -Advt

Related Articles

Back to top button