CrimeKannada NewsKarnataka NewsLatest
*BREAKING: ಜೇನು ಕೃಷಿ ಕಲಿಸುವ ನೆಪದಲ್ಲಿ ಬೆಳಗಾವಿ ಮೂಲದ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ಜೇನು ಕೃಷಿ ಕಲಿಸಿಕೊಡುವುದಾಗಿ ಹೇಳಿ ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೊಬ್ಬ ನಿರಂತರ ಅತ್ಯಾಚಾರವೆಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿ ಮೇಲೆ ಕಾಮುಕ ನಿರಂತರ ಅಟ್ಟಹಾಸ ಮೆರೆದಿದ್ದಾನೆ. ಪ್ರಕರಣ ಸಂಬಂಧ ಆರೋಪಿ ಅಬ್ದುಲ್ ಗಪೂರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಜೇನು ಕೃಷಿ ಕಲಿಸಿಕೊಡುವುದಾಗಿ ಆರೋಪಿ ಹೇಳಿದ್ದ. ಜೇನುಕೃಷಿ ಕಲಿಯಲೆಂದು ಬಾಲಕಿ ಪೋಷಕರು ಆಕೆಯನ್ನು ಆರ್ಪಿ ಮನೆಯಲ್ಲಿ ಬಿಟ್ಟು ಹೋಗಿದ್ದರು. ಜನು ಕೃಷಿ ಕಲಿಸುತ್ತೇನೆಂದ ಆರೋಪಿ ಬಾಲಕಿ ಮೇಲೆ ಡಿಸೆಂಬರ್ 2ರಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಬಾಲಕಿ ಹಾಗೂ ಆಕೆಯ ಪೋಷಕರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.
ಅಬ್ದುಲ್ ಗಪೂರ್ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.



