Belagavi NewsBelgaum NewsKannada NewsKarnataka NewsLatest
*ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ದುರಂತ: ಟ್ರ್ಯಾಕ್ಟರ್ ಹರಿದು ರೈತ ಸಾವು*

ಪ್ರಗತಿವಾಹಿನಿ ಸುದ್ದಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ಹರಿದು ರೈತ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ನಡೆದಿದೆ.
ಇಲ್ಲಿನ ಸಾವಳಗಿಯಲ್ಲಿ ಈ ದುರಂತ ಸಂಭವಿಸಿದೆ. ಚಂದ್ರಯ್ಯ ಬಸಲಿಂಗಯ್ಯ ಮಠಪತಿ (65) ಮೃತ ರೈತ. ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ರೈತನ ಮೇಲೆ ಹರಿದಿದ್ದು, ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿದ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
