
ಪ್ರಗತಿವಾಹಿನಿ ಸುದ್ದಿ: ಮುಂಬೈಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.
ದೆಹಲಿಯಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ಸಮಸ್ಯೆಯಿಂದಾಗಿ ದೆಹಲಿಯಲ್ಲಿಯೇ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಏರ್ ಇಂಡಿಯಾ AI887 ವಿಮಾನ ತುರ್ತು ಭೂಸ್ಪರ್ಶ ವಾಗಿದ್ದು, ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು, ಸಿಬ್ಬಂದಿಗಳು ಸುರಕ್ಷತವಾಗಿದ್ದಾರೆ ಎಂದು ವಿಮಾನ ಯಾನ ಸಂಸ್ಥೆ ತಿಳಿಸಿದೆ.



