
ಪ್ರಗತಿವಾಹಿನಿ ಸುದ್ದಿ: ಜಿಲ್ಲಾಧಿಕಾರಿ ಕಚೇರಿ, ಆರ್.ಟಿಓ ಕಚೇರಿ ಬಳಿಕ ಈಗ ತಾಲೂಕು ಕಚೇರಿಗೂ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಮೈಸೂರು ಜಿಲ್ಲೆಯ ಸರಗೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.
ತಾಲೂಕು ಕಚೇರಿಯ ಇ-ಮೇಲ್ ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಆರ್ ಡಿಎಕ್ಸ್ ಬಾಂಬ್ ಕೆಲವೇ ಸಮಯದಲ್ಲಿ ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸರಗೂರು ಠಾಣೆ ಪೊಲೀಸರು, ಶ್ವಾನದಳ, ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ.



