Kannada NewsKarnataka NewsLatestPolitics

*ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರು ಹೆಗಲು ಮುಟ್ಟಿ ನೋಡಿಕೊಳ್ಳುವುದೇಕೆ: ಸಿಎಂ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಬಿಜೆಪಿ ಮಾತ್ರ ಏಕೆ ವಿರೋಧಿಸುತ್ತಾರೆ? ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಶಾಂತಿ ಹಾಗೂ ಭಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದೆ ಎಂದರು. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಎಂದು ಅವರು ಹೇಳಿದರು.

ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಉದ್ಭವಿಸುವುದಿಲ್ಲ
ಫೆಬ್ರವರಿ ಮಾರ್ಚ್ ತಿಂಗಳ ಗೃಹ ಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು. 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ ?ಎಂದರು. ಗೃಹಲಕ್ಷ್ಮಿ ಹಣವನ್ನು ಲಪಟಾಯಿಸಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ ಎಂದರು. ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ ಹಣ ಇನ್ನು ಬಿಡುಗಡೆಯಾಗಿಲ್ಲ ಎಂದರು.

ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಅದು ಒಪ್ಪಬೇಕಾದ ವಿಚಾರ. ಯಾರು ಪಕ್ಷಕ್ಕಿಂತ ದೊಡ್ಡವರಾದರೂ ಸಾಧ್ಯವೇ ಇಲ್ಲ ಎಂದರು.

Home add -Advt

ನಾಯಕತ್ವ ಬದಲಾವಣೆ ರಾಹುಲ್ ಗಾಂಧಿ ತೀರ್ಮಾನಿಸಬೇಕು
ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದು ಸಿಎಂ ತಿಳಿಸಿದರು.

ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಸಿಎಂ ಪುನರುಚ್ಚಾರ
ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ ಅವರ ತೀರ್ಮಾನಕ್ಕೆ ನಾವು ಬದ್ಧ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.

ನಾಯಕತ್ವ ಬದಲಾವಣೆ; ಮಾಧ್ಯಮಗಳ ಸೃಷ್ಟಿ
ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ. ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲು ಪುನಹ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.

ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದರೆ ತಪ್ಪೇನು?
ಮಾಜಿ ಸಚಿವ ಕೆ. ಎನ್ ರಾಜಣ್ಣ ನಿನ್ನೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಭೇಟಿ ಮಾಡಲಿ, ಡಿ.ಕೆ ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾಗಿದ್ದು ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ
ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ನಾನೇ ಎಂದು ಉಪಮುಖ್ಯಮಂತ್ರಿಗಳು ಹೇಳಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆದರ ಪ್ರಶ್ನೆಯೇ ಇಲ್ಲ. ಎಸ್.ಎಂ ಕೃಷ್ಣಾ ಅವರು ಆಗ ಮುಖ್ಯಮಂತ್ರಿಗಳಿದ್ದರು, ಸರ್ಕಾರ ಮಾಡಿತ್ತು ಎಂದರು.

ಬಜೆಟ್ ಸಿದ್ಧತೆ ನಡೆದಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ತಯಾರಿ ನಡೆಸುವಾಗ ತಿಳಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದರು.

Related Articles

Back to top button