*ಶೀತಗಾಳಿಗೆ ಜನ ಕಂಗಾಲು: ಎರಡು ಜಿಲ್ಲೆಗೆ ಯೆಲ್ಲೋ ಅಲರ್ಟ್*

ಪ್ರಗತಿವಾಹಿನಿ ಸುದ್ದಿ: ಮೈ ಕೊರೆಯುವ ಚಳಿಗೆ ಕಳೆದೊಂದು ವಾರದಿಂದ ಜನರು ತತ್ತರಿಸಿಹೋಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ದಟ್ಟವಾದ ಮಂಜು ಹಾಗೂ ಶೀತಗಾಳಿಗೆ ಜನ ಕಂಗಾಲಾಗಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಶೀತದಲೆಯ ಎಫೆಕ್ಟ್ ಜೋರಾಗಿದ್ದು, ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಕಲಬುರಗಿ ಮತ್ತು ಬೀದರ್‌ನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹಾಗೆಯೇ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಚಳಿಯಿದ್ದು, ಥಂಡಿ ಜತೆಗೆ ಒಣ ಹವೆಯ ವಾತಾವರಣ ಇರಲಿದೆ.
ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ಚಳಿಯ ಪ್ರಮಾಣವೂ ತೀವ್ರವಾಗಿದೆ. ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಜನರು ಅರೋಗ್ಯ ಕಾಪಾಡಿಕೊಳ್ಳುವಂತೆ ತಜ್ಞರು ಸಲಹೆ ನೀಡಿದ್ದಾರೆ.
ಮುಂದಿನ ಎರಡು ದಿನಗಳ ಬಳಿಕ ರಾಜ್ಯದೆಲ್ಲೆಡೆ ಚಳಿ ಇನ್ನಷ್ಟು ಹೆಚ್ಚಾಗಲಿದ್ದು, ವಾಹನ ಚಾಲನೆ ಮಾಡುವವರು ಜಾಗೃತಿಯಾಗಿರಿ ಹಾಗೂ ಮಕ್ಕಳು ಹಾಗೂ ವೃದ್ಧರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.



