
ಪ್ರಗತಿವಾಹಿನಿ ಸುದ್ದಿ: ಲಂಚಕ್ಕೆ ಕೈಯೊಡ್ದಿದಾಗಲೇ ಪಿಎಸ್ಐ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಬೆಂಗಳೂರಿನ ಚಿಕ್ಕಜಾಲದ ಪಿಎಸ್ಐ ಶಿವಣ್ಣ ಲೋಕಾಯುಕ್ತ ಬಲೆಗೆ ಬಿದ್ದವರು. ವಂಚನೆ ಕೇಸ್ ಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ೩ ಲಕ್ಷ ಹಣ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪಿಎಸ್ಐ ಶಿವಣ್ಣನನ್ನು ಬಂಧಿಸಿದ್ದಾರೆ.


