ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಸಾಮಾಜಿಕ ಜಾಲತಾಣಗಳಲ್ಲೊಂದಾದ ಇನ್ ಸ್ಟಾಗ್ರಾಮ್ ನಲ್ಲಿ ತಮ್ಮ ಹೆಸರಿನಲ್ಲಿ ಖಾತೆ ತೆರೆದು, ಹಣ ವಸೂಲಿ ಮಾಡಲಾಗುತ್ತಿದೆ ಎಂದು ಐಪಿಎಸ್ ಅಧಿಕಾರಿ ಡಿ.ರೂಪಾ ದೂರು ದಾಖಲಿಸಿದ್ದಾರೆ.
ಇನ್ ಸ್ಟಾಗ್ರಾಂ ನಲ್ಲಿ ನಾನು ಖಾತೆಯನ್ನೇ ಹೊಂದಿಲ್ಲ. ಆದರೆ ನನ್ನ ಹೆಸರಿನಲ್ಲಿ ಯಾರೋ ಖಾತೆ ತೆರೆದು, ಬಡ ಹೆಣ್ಣುಮಕ್ಕಳಿಗೆ ನೆರವು ನೀಡಿ ಎನ್ನುವ ಒಕ್ಕಣೆಯೊಂದಿಗೆ ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ. ವ್ಯಕ್ತಿಯೊಬ್ಬರು ಈ ಕುರಿತು ಪ್ರಶ್ನಿಸಿದಾಗ ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ರೂಪಾ ದೂರು ನೀಡಿದ್ದಾರೆ.
ವಿಷಯ ಗಮನಕ್ಕೆ ಬಂದ ತಕ್ಷಣ ಇನ್ ಸ್ಟಾಗ್ರಾಂ ಅಧಿಕಾರಿಗಳ ಗಮನಕ್ಕೂ ತಂದಿದ್ದೇನೆ. ತಕ್ಷಣ ಖಾತೆ ಡಿಲೀಟ್ ಮಾಡಲು ಕೋರಿದ್ದೇನೆ ಎಂದು ರೂಪಾ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ