
ಪ್ರಗತಿವಾಹಿನಿ ಸುದ್ದಿ: ನಿವೃತ್ತ ಯೋಧರೊಬ್ಬರು ತನ್ನದೇ ಪಿಸ್ತೂಲ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡಿನ ಘಟ್ಟದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಜಿ.ಕೆ.ಕಲ್ಲೇಶ್ (60) ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ನಿವೃತ್ತ ಯೋಧ.
ಆತ್ಮಹತ್ಯೆಗೂ ಮುನ್ನ ಸಕಲೇಶಪುರ ಪೊಲೀಸ್ ಠಾಣೆಗೆ ಕರೆಮಾದಿದ್ದ ಕಲ್ಲೇಶ್, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದ. ಪೊಲೀಸರು ಸ್ಥಳಕ್ಕಾಗಮಿಸುವಷ್ಟರಲ್ಲಿ ಕಲ್ಲೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಲ್ಲೇಶ್ ಎರಡು ಮದುವೆಯಾಗಿದ್ದರು. ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಹಳೆಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



