Kannada NewsKarnataka NewsLatestPolitics

*BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಿಗ್ ಶಾಕ್ ಎದುರಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಬಂಧನ ಭೀತಿಯಲ್ಲಿರುವ ಶಾಸಕ ಭೈರತಿ ಬಸವರಾಜ್ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಭೈರತಿ ಬಸವರಾಜ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಶಾಸಕ ಭೈರತಿ ಬಸವರಾಜ್ ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆ ಇದೆ.

ಕೆಲ ದಿನಗಳ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಭೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ವಿಚಾರಣಾಧೀನ ನ್ಯಾಯಾಲಯದ ಮೊರೆ ಹೋಗಬಹುದು ಎಂದು ತಿಳಿಸಿತ್ತು. ಇದರ ಬೆನ್ನಲ್ಲೇ ಜನಪ್ರತಿನಿಧಿಗಳ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೀಗ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿಯೂ ಭೈರತಿ ಬಸವರಾಜ್ ಗೆ ಹಿನ್ನಡೆಯಾಗಿದ್ದು, ಬಂಧನ ಭೀತಿ ಹೆಚ್ಚಾಗಿದೆ.

Home add -Advt

Related Articles

Back to top button