EducationKannada NewsKarnataka NewsLatest

*ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ: ೨೦೨೫-೨೬ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.


ದಿನಾಂಕ ೧೦-೦೨-೨೦೨೫ ಮತ್ತು ಅದರ ನಂತರ ಪ್ರಥಮ ವರ್ಷದ ಪಿ.ಎಚ್.ಡಿ ಪ್ರಾರಂಭಿಸಿರಬೇಕು. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-೧, ೨(ಎ), ೩(ಎ) ಹಾಗೂ ೩(ಬಿ)ಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಆಸಕ್ತರು ಜನೆವರಿ, ೦೯, ೨೦೨೬ ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಪ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್ ಸೈಟ್ : https://bcwd.karnataka.gov.in ಗೆ ಅಥವಾ ದೂರವಾಣಿ ಸಂಖ್ಯೆ: ೮೦೫೦೭೭೦೦೦೪ ಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button