ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಇಂದು ರಾಜ್ಯ ಸಚಿವ ಸುರೇಶ್ ಅಂಗಡಿಯವರನ್ನು ಬೆಳಗಾವಿಯಲ್ಲಿ ಭೇಟಿಯಾಗಿ ಕರಾವಳಿಯ ರೈಲ್ವೆ ಸಮಸ್ಯೆಗಳ ಬಗ್ಗೆ ಚರ್ಚಿಸಿತು.
ಕರಾವಳಿಯಿಂದ ರಾಜಧಾನಿಗೆ ಸಂಪರ್ಕಕ್ಕೆ ನೂತನ ರೈಲ್ವೆ ಆರಂಭಿಸಲು ಮತ್ತು ಕರ್ನಾಟಕ ಕರಾವಳಿ ನಿಲ್ದಾಣಗಳ ಅಭಿವೃದ್ಧಿ ಕ್ರಮಕ್ಕೆ ಸಮಿತಿ ಆಗ್ರಹಿಸಿತು. ಅದಕ್ಕೆ ಸೂಕ್ತವಾಗಿ ಸ್ಪಂದಿಸಿದ ರೈಲ್ವೆ ಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ನೂತನ ಬೆಂಗಳೂರು -ಕಾರವಾರ ರೈಲಿಗೆ ಈಗಾಗಲೇ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಮನವಿ ಸಲ್ಲಿಸಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಅಧ್ಯಕ್ಷ ಗಣೇಶ್ ಪುತ್ರನ್, ಕುಂದಾಪುರ ರೈಲ್ವೆ ನಿಲ್ದಾಣದಲ್ಲಿ ರೈಲು ಸೀಟು ಕಾಯ್ದಿರಿಸುವ ಕೇಂದ್ರ(PRSS ) ಮತ್ತು ಕೊಚುವೆಲಿ – ಮುಂಬೈ (LTE ) ಎಕ್ಸಪ್ರೆಸ್ ರೈಲಿಗೆ ಕುಂದಾಪುರದಲ್ಲಿ ನಿಲುಗಡೆಗೆ ಮನವಿ ಸಲ್ಲಿಸಿದರು. ಬೇಡಿಕೆಗಳಿಗೆ ಸ್ಪಂದಿಸಿದ ಸಚಿವರು ರೈಲ್ವೆ ಬೋರ್ಡ್ ಪರಿಶೀಲನೆಗೆ ಆದೇಶಿಸಿದರು.
ಸಮಿತಿಯ ನಿಯೋಗದಲ್ಲಿ ಅಧ್ಯಕ್ಷ ಗಣೇಶ್ ಪುತ್ರನ್, ಕೊಂಕಣ ರೈಲು ಸಲಹಾ ಸಮಿತಿಯ ಸದಸ್ಯ ಮತ್ತು ಕುಮಟಾ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ರಾಜೀವ ಗಾಂವ್ಕರ್, ಕಾರ್ಯದರ್ಶಿ ಪ್ರವೀಣ್ ಕುಮಾರ್ ಟಿ, ಉದ್ಯಮಿ ಸುಧಾಕರ ಶೆಟ್ಟಿ ಮತ್ತು ಸದಸ್ಯ ಜೋಯ್ ಕರ್ವಾಲೋ ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ