
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಹೆಂಡತಿ ಜೊತೆ ಜಗಳ ತೆಗೆದು ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.
ಬಾಲ ಮುರುಗನ್ ಹೆಂಡತಿ ಮೇಲೆ ಗುಂಡು ಹಾರಿಸಿದ ಪತಿಯಾಗಿದ್ದು ಭುವನೇಶ್ವರಿ ಗುಂಡೇಟಿಗೆ ಗಂಭೀರ ಗಾಯಗೊಂಡು ಮೃತಪಟ್ಟ ಮಹಿಳೆ. ಪತಿ ಮತ್ತು ಪತ್ನಿ ನಡುವೆ ಕೋರ್ಟ್‌ನಲ್ಲಿ ಡೈವೋರ್ಸ್ ಕೇಸ್ ನಡೆಯುತ್ತಿತ್ತು. ಕೋರ್ಟ್ ಕೇಸ್ ಮುಗಿಸಿಕೊಂಡು ಬಂದಿದ್ರು. ಈ ವೇಳೆ ಜಗಳ ತಾರಕಕ್ಕೇರಿ ಗನ್‌ನಿಂದ ಶೂಟ್ ಮಾಡಿದ್ದು, ಆಸ್ಪತ್ರೆಯಲ್ಲಿ ಪತ್ನಿ ಸಾವನ್ನಪ್ಪಿದ್ದಾಳೆ.
ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಹೆಂಡತಿ ಮೇಲೆ ಗುಂಡು ಹಾರಿಸಿದ ಗಂಡ, ಬಳಿಕ ಪೊಲೀಸ್ ಠಾಣೆಗೆ ಹೋಗಿ ಸರೆಂಡರ್ ಆಗಿದ್ದಾನೆ. ಪಿಸ್ತೂಲ್ ಅಕ್ರಮವಾಗಿ ತರಿಸಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಇದ್ದು ಆರೋಪಿ ವಶಕ್ಕೆ ಪಡೆದು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.
ತಮಿಳುನಾಡು ಮೂಲದ ದಂಪತಿ ಇವರು. ಬಾಲಮುರುಗನ್ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪತ್ನಿ ಭುವನೇಶ್ವರಿ ಬ್ಯಾಂಕ್ ಉದ್ಯೋಗಿ ಆಗಿದ್ದರು.




