CrimeNationalPolitics

*ಹುಬ್ಬಳ್ಳಿ ಮರ್ಯಾದಾ ಹತ್ಯೆ ಕೇಸ್: ಮತ್ತೆ ಮೂವರ ಬಂಧನ*

ಪ್ರಗತಿವಾಹಿನಿ ಸುದ್ದಿ: ರಾಜ್ಯವನ್ನೆ ಬೆಚ್ಚಿ ಬೀಳಿಸಿದ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರದಲ್ಲಿ ನಡೆದ ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ‌‌. 

ಮಗಳು ಅಂತರ್ಜಾತಿ ವಿವಾಹವಾಗಿದ್ದರಿಂದ ಸಿಟ್ಟಿನಲ್ಲಿದ್ದ ಮಾನ್ಯ ಎಂಬ ಯುವತಿ ತಂದೆ ಹಾಗೂ ಕುಟುಂಬ ಮನೆಗೆ ನುಗ್ಗಿ ತಂದೆ ತಾಯಿ, ಹಾಗೂ ಮಾನ್ಯ ಮೇಲೆ ಪೈಪ್ ಹಾಗೂ ಗುದ್ದಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮೊದಲೇ ಏಳು ತಿಂಗಳು ಗರ್ಭಿಣಿ ಆದ್ದರಿಂದ ಹಲ್ಲೆಯಿಂದಾಗಿ ತೀವ್ರ ರಕ್ತಸ್ರಾವ ಉಂಟಾಗಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಾನ್ಯ ಮೃತಪಟ್ಟಿದ್ದಾರೆ.

ಸದ್ಯ ಈ ಪ್ರಕರಣ ರಾಜ್ಯದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾನ್ಯ ತಂದೆ ಪ್ರಕಾಶ್ ಗೌಡ ಪಾಟೀಲ್, ವೀರನಗೌಡ ಪಾಟೀಲ್‌, ಅರುಣ್ ಗೌಡ ಪಾಟೀಲ್ ಎಂಬುವವರನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ.

Home add -Advt

Related Articles

Back to top button