
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾರಕಾಸ್ತ್ರಗಳನ್ನು ಹೊಂದಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬೆಳಗಾವಿ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಸ್ಟ್ರಾಟಿಂಗ್ ಪ್ರಕರಣಗಳು ಹೆಚ್ಚಾಗುತ್ತಿದ್ದುದ್ದರಿಂದ, ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಂಶಯಾಸ್ಪದ ವ್ಯಕ್ತಿಗಳನ್ನು ಪರಿಶೀಲನೆ ಮಾಡುತ್ತಿರುವಾಗ ಹಳೆ ಪಿ. ಬಿ ರಸ್ತೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಗಿರೀಶ ಮಹಾಬಳೇಶ್ವರ ಬಕ್ಕನ್ನವರ (24) ಎಂಬಾತನ ಹತ್ತಿರ ಮಾರಕಾಸ್ತ್ರ ವಶಕ್ಕೆ ಪಡೆಯಲಾಗಿದೆ.
ಈತನು ಹರಿತವಾದ ಚಾಕು ಇಟ್ಟುಕೊಂಡಿದ್ದು, ಜಪ್ತಿ ಮಾಡಲಾಗಿದೆ. ಆರೋಪಿತನ ವಿರುದ್ಧ ಶಹಾಪೂರ ಪೊಲೀಸ್ ಠಾಣೆ ಪ್ರ ಸಂ.132/2025 ಕಲಂ.27(1) ಇಂಡಿಯನ್ ಆರ್ಮ ಆಕ್ಷ & ಕಲಂ.97 ಕೆ.ಪಿ.ಆಕ್ಷ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಿ, ಪ್ರಕರಣದ ತನಿಖೆ ಮುಂದುವರೆಸಲಾಗಿದೆ.



