Kannada NewsKarnataka NewsLatest

ಪೌರತ್ವ ಕಾಯ್ದೆ ಬಗ್ಗೆ ಯಾರಿಗೂ ಗೊಂದಲ ಬೇಡ -ಜಾಗೃತಿ ಮೂಡಿಸಿದ ವಿಶ್ವನಾಥ ಪಾಟೀಲ

ಪ್ರಗತಿವಾಹಿನಿ ಸುದ್ದಿ, ಬೈಲಹೊಂಗಲ – ಮಾಜಿ ಶಾಸಕ ಹಾಗೂ ಬೆಳಗಾವಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ (ಗ್ರಾಮೀಣ) ಡಾ. ವಿಶ್ವನಾಥ್ ಪಾಟೀಲ ಬೈಲಹೊಂಗಲದಲ್ಲಿ  ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಮಹಾ ಸಂಪರ್ಕ ಅಭಿಯಾನದಲ್ಲಿ ಪಾಲ್ಗೊಂಡು ಅನೇಕ ಮುಸ್ಲಿಂ ರನ್ನು  ಭೇಟಿ ಮಾಡಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿದರು.

ಮನೆ ಹಾಗೂ ಅಂಗಡಿಗಳಿಗೆ ತೆರಳಿದ ವಿಶ್ವನಾಥ ಪಾಟೀಲ ಹಾಗೂ ಕಾರ್ಯಕರ್ತರು, ಪೌರತ್ವ ಕಾಯ್ದೆ ತಿದ್ದುಪಡಿಯಿಂದ ದೇಶದಲ್ಲಿರುವ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ. ಇದು ಹೊರಗಿನಿಂದ ಅಕ್ರಮ ಪ್ರವೇಶ ಮಾಡುವವರಿಗೆ ಮಾತ್ರ ಅನ್ವಯವಾಗುತ್ತದೆ. ಹಾಗಾಗಿ ಇದರ ಬಗ್ಗೆ ಯಾರಿಗೂ ಗೊಂದಲ ಬೇಡ ಎಂದು ವಿವರಿಸಿದರು.

ಕಾಂಗ್ರೆಸ್ ನವರ ಅನಗತ್ಯವಾಗಿ ಈ ಕಾಯ್ದೆ ತಿದ್ದುಪಡಿ ಬಗ್ಗೆ ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಈ ಕಾಯ್ದೆಯಿಂದ ರಾಷ್ಟ್ರಕ್ಕೆ ಹಾಗೂ ಇಲ್ಲಿರುವ ಎಲ್ಲ ಜನಾಂಗದವರಿಗೆ ಒಳಿತಾಗುತ್ತದೆ. ಹಾಗಾಗಿ ಎಲ್ಲರೂ ಇದಕ್ಕೆ ಬೆಂಬಲ ಸೂಚಿಸಬೇಕು ಎಂದು ಅವರು ಕೋರಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರಾಷ್ಟ್ರವನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸುತ್ತಿದ್ದಾರೆ. ಎಲ್ಲ ಜಾತಿ, ಧರ್ಮಗಳನ್ನು ಸಮಾನ ದೃಷ್ಟಿಕೋನದಿಂದ ಕಾಣುತ್ತಿದ್ದಾರೆ. ಮುಸ್ಲಿಮರು ಸೇರಿದಂತೆ ಯಾರೂ ಹೆದರಬೇಕಾದ ಅವಶ್ಯಕತೆ ಇಲ್ಲ. ಕಾಂಗ್ರೆಸ್ ನ ದಿಕ್ಕು ತಪ್ಪಿಸುವ ಕೃತ್ಯಕ್ಕೆ ಯಾರೂ ಬಲಿಯಾಗಬಾರದು ಎಂದು ವಿಶ್ವನಾಥ ಪಾಟೀಲ ವಿನಂತಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button