Kannada NewsKarnataka NewsLatestPolitics

*ಕೇಂದ್ರ ಸರ್ಕಾರದಿಂದ ರೈಲ್ವೆ ಪ್ರಯಾಣ ದರ ಹೆಚ್ಚಳ: ಬಿಜೆಪಿ ವಿರುದ್ಧ ಸಿಎಂ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಹಿರಿಯೂರು ಬಸ್ ಅಪಘಾತ: ತನಿಖೆ ನಡೆಸಲಾಗುವುದು

ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಬಸ್ ಮತ್ತು ಟ್ರಕ್ ಅಪಘಾತದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಅಪಘಾತದಲ್ಲಿ ಟ್ರಕ್ ಚಾಲನ ತಪ್ಪಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್ ವಿಭಜಕವನ್ನು ದಾಟಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 4 ಮಹಿಳೆಯರು ಹಾಗೂ ಒಂದು ಮಗು ಹಾಗೂ ಟ್ರಕ್ ಚಾಲಕ ಸಾವಿಗೀಡಾಗಿದ್ದಾರೆ. ಬಸ್ಸುಗಳು ಎಲ್ಲಾ ಸುರಕ್ಷತೆಯ ಕ್ರಮಗಳನ್ನು ಅನುಸರಿಸುವುದು ಅವಶ್ಯಕ. ಅಪಘಾತದ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.

Home add -Advt

ಕಾಂಗ್ರೆಸ್ ನ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ಇಂದು ನವದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದರು.

Related Articles

Back to top button