
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಸಂಘದ ಕಚೇರಿಯನ್ನು ಸ್ಥಳಾಂತರ ಮಾಡಲಾಗಿದೆ. ಈ ಹಿಂದೆ ಇದ್ದ ಬೆಳಗಾವಿಯ ಒಲ್ಡ್ ಸಿಟಿ ಸರ್ವೇ ಆಫೀಸ್, ಡಿ.ಸಿ.ಕಪೌಂಡ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಘದ ಕಚೇರಿಯನ್ನು ಜಿಲ್ಲಾಧಿಕಾರಿಗಳ ಆದೇಶದನ್ವಯ ಬೆಳಗಾವಿಯ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರ ಸರ್ಕಾರಿ ವಸತಿ ಗೃಹ ವಿಶ್ವಶ್ವರಯ್ಯ ನಗರ ರಸ್ತೆಗೆ ಸ್ಥಳಾಂತರಿಸಲಾಗಿದೆ.
ಜಿಲ್ಲೆಯ ಎಲ್ಲ ಹಿರಿಯ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಸ್ಟೇಟ್ ಸೀನಿಯರ ಸಿಟಿಜನ್ ಅಸೋಸಿಯೇಶನ್ (ರಿ) ಎನ್.ಜಿ.ಓ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




