
ಪ್ರಗತಿವಾಹಿನಿ ಸುದ್ದಿ: ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಈ ಅಪಘಾತ ನಡೆದಿದೆ. ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರು ಚಾಲಕ ಗೋವಿಂದರಾಜು, ಅಶೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುವನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದ್ದೂರು ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.



